ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ರೈಲ್ವೆ ವೀಲ್ ಫ್ಯಾಕ್ಟರಿ 2026 ರ ನೇಮಕಾತಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡುವ ಕನಸ್ಸನ್ನು ಹೊತ್ತಿರುವ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ!
RWF Recruitment in Kannada
ಅಭ್ಯರ್ಥಿಗಳು ಜಸ್ಟ್ 10th ಪಾಸ್ ಆಗಿದ್ರೆ ಸಾಕು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು 01-04-2026 ರ ವರೆಗೂ ಅವಕಾಶವಿದೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಕ್ಟ್ ಅಪ್ಪ್ರೆಂಟಿಸ್ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು, ವಯೋಮಿತಿ ವಿವರ, ಅರ್ಜಿ ಸಲ್ಲಿಸುವ ವಿಧಾನ, ಹಾಗೂ ಹುದ್ದೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಳನ್ನು ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ನೀಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಇದೇ ರೀತಿ ಇನ್ನಷ್ಟು ಹೊಸ ಹೊಸ ವಿಷಯಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಮಲ್ನಾಡ್ ನ್ಯೂಸ್.ಇನ್ ಗೆ ಭೇಟಿ ನೀಡಿ.
ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ರೈಲ್ವೆ ವೀಲ್ ಫ್ಯಾಕ್ಟರಿ (RWF) |
| ಹುದ್ದೆಯ ಹೆಸರು | ಆಕ್ಟ್ ಅಪ್ರೆಂಟಿಸ್ |
| ಹುದ್ದೆಯ ಒಟ್ಟು ಸಂಖ್ಯೆ | 192 ಹುದ್ದೆಗಳು |
| ಉದ್ಯೋಗ ಸ್ಥಳ | ಯಲಹಂಕ ಬೆಂಗಳೂರು-ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
ಹುದ್ದೆಯ ಕಿರು ವಿಮರ್ಶೆ:
ಯಲಹಂಕದ ರೈಲ್ವೆ ವೀಲ್ ಫ್ಯಾಕ್ಟರಿ (RWF) ಯು ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 192 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಶೇಕಡಾ 50% ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರಬೇಕು ಹಾಗೂ ಕನಿಷ್ಠ 15 ರಿಂದ 24 ವರ್ಷ ವಯೋಮಿತಿಯನ್ನು ಹೊಂದಿರಬೇಕು. ರೈಲ್ವೆ ಇಲಾಖೆಯಲ್ಲಿ ವೃತ್ತಿಪರ ತರಬೇತಿಯನ್ನು ಪಡೆದುಕೊಳ್ಳಬೇಕು ಎನ್ನುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರ:
ಯಲಹಂಕದ ರೈಲ್ವೆ ವೀಲ್ ಫ್ಯಾಕ್ಟರಿ (RWF) ಒಟ್ಟು 192 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಯಾವ ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಎನ್ನುವುದನ್ನು ಈ ಕೆಳಗಿನ ಕೋಷ್ಟಕದಲ್ಲಿ ತಿಳಿದುಕೊಳ್ಳೋಣ.
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಟರ್ನರ್ | 05 ಹುದ್ದೆಗಳು |
| ಮೋಟಾರ್ ವೆಹಿಕಲ್ ಮೆಕ್ಯಾನಿಕ್ | 08 ಹುದ್ದೆಗಳು |
| ಎಲೆಕ್ಟ್ರಿಷಿಯನ್ | 18 ಹುದ್ದೆಗಳು |
| ಎಲೆಕ್ಟ್ರಾನಿಕ್ ಮೆಕ್ಯಾನಿಕ್ | 22 ಹುದ್ದೆಗಳು |
| ಸಿ ಏನ್ ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್ | 23 ಹುದ್ದೆಗಳು |
| ಮಷಿನಿಸ್ಟ್ | 31 ಹುದ್ದೆಗಳು |
| ಫಿಟ್ಟರ್ | 85 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
1. ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕ ಗಳಿಸಿ ಉತ್ತೀರ್ಣರಾಗಿರಬೇಕು.
2. ಅಭ್ಯರ್ಥಿಗಳು ಸಂಬಂಧಿಸಿದ ತಾಂತ್ರಿಕ ವಿಭಾಗದಲ್ಲಿ ರಾಷ್ಟೀಯ ವೃತ್ತಿಪರ ಮಂಡಳಿಯಿಂದ ರಾಷ್ಟೀಯ ವೃತ್ತಿಪರ ಪ್ರಮಾಣಪತ್ರವನ್ನು ಹೊಂದಿರಬೇಕು. ಒಂದುವೇಳೆ ಪ್ರಮಾಣಪತ್ರವನ್ನು ಹೊಂದಿಲ್ಲವಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
3. ಅಭ್ಯರ್ಥಿಗಳು ತಮ್ಮ ಜಿಲ್ಲೆಯ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ. ನೀವೇನಾದರೂ ರೈಲ್ವೆ ನೌಕರರ ಮಕ್ಕಳಾಗಿದ್ದರೆ ಇದು ಅನ್ವಯವಾಗುವುದಿಲ್ಲ.
| ವಿಶೇಷ ಸೂಚನೆ: “ನೀವೇನಾದರೂ ಡಿಪ್ಲೊಮಾ ಅಥವಾ ಇಂಜಿನಿಯರಿಂಗ್ ಪದವಿಯನ್ನು ಹೊಂದಿದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವುದಿಲ್ಲ.” |
ಹುದ್ದೆಗೆ ಸಂಬಂಧಿಸಿದ ವಯೋಮಿತಿ ವಿವರ:
ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ವಯೋಮಿತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.
- ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ವಯೋಮಿತಿಯನ್ನು ಹೊಂದಿರಬೇಕು
- ಹಾಗೂ ಅಭ್ಯರ್ಥಿಗಳು ಗರಿಷ್ಟ 24 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ಕೆಲವು ನಿಯಮಗಳನ್ವಯ ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಇತರೆ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಜೊತೆಗೆ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದಂತೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
| ವಿವಿಧ ವರ್ಗಗಳು | ಅರ್ಜಿ ಶುಲ್ಕಗಳ ವಿವರ |
| ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ | ಯಾವುದೇ ಅರ್ಜಿ ಶುಲ್ಕ ಇಲ್ಲ |
| ಮಹಿಳೆಯರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ | ಯಾವುದೇ ಅರ್ಜಿ ಶುಲ್ಕ ಇಲ್ಲ |
| ಸಾಮಾನ್ಯ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ | ₹100 |
ವೇತನ ಶ್ರೇಣಿ:
| ಹುದ್ದೆಯ ಹೆಸರು | ವೇತನ ಶ್ರೇಣಿ |
| ಟರ್ನರ್ | ಮಾಸಿಕ ₹12,261 |
| ಮೋಟಾರ್ ವೆಹಿಕಲ್ ಮೆಕ್ಯಾನಿಕ್ | ಮಾಸಿಕ ₹12,261 |
| ಎಲೆಕ್ಟ್ರಿಷಿಯನ್ | ಮಾಸಿಕ ₹12,261 |
| ಎಲೆಕ್ಟ್ರಾನಿಕ್ ಮೆಕ್ಯಾನಿಕ್ | ಮಾಸಿಕ ₹12,261 |
| ಮಷಿನಿಸ್ಟ್ | ಮಾಸಿಕ ₹12,261 |
| ಫಿಟ್ಟರ್ | ಮಾಸಿಕ ₹12,261 |
| ಸಿ ಏನ್ ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್ | ಮಾಸಿಕ ₹10,899 |
ತರಬೇತಿ ಅವಧಿ:
ಆಕ್ಟ್ ಅಪ್ರೆಂಟಿಸ್ ಹುದ್ದೆಯು ಶಾಶ್ವತ ಉದ್ಯೋಗವಲ್ಲ ಬದಲಾಗಿ ಒಂದು ವರ್ಷದ ವೃತ್ತಿಪರ ತರಬೇತಿಯಾಗಿದೆ. ಈ ತರಬೇತಿ ಅವಧಿಯು ವಿವಿಧ ತಾಂತ್ರಿಕ ವಿಭಾಗಗಳಲ್ಲಿ ಬೇರೆ ಬೇರೆ ರೀತಿ ಇರುತ್ತದೆ. ಅವುಗಳ ವಿವರ ಹೀಗಿದೆ,
- ಟರ್ನರ್, ಮೋಟಾರ್ ವೆಹಿಕಲ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಮಷಿನಿಸ್ಟ್, ಫಿಟ್ಟರ್ ಹುದ್ದೆಗಳಿಗೆ 1 ವರ್ಷದ ವೃತ್ತಿಪರ ತರಬೇತಿ ಇರುತ್ತದೆ.
- ಸಿ ಏನ್ ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್ ಹುದ್ದೆಗಳಿಗೆ 6 ತಿಂಗಳ ವೃತ್ತಿಪರ ತರಬೇತಿ ಇರುತ್ತದೆ.
ಅಗತ್ಯ ದಾಖಲೆಗಳು:
ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳೆಗೆ ನೀಡಲಾದ ದಾಖಲೆಗಳನ್ನು ಹೊಂದಿರಬೇಕು. ಅವುಗಳೆಂದರೆ,
- SSLC ಅಂಕ ಪಟ್ಟಿ
- ITI ಪ್ರಮಾಣಪತ್ರ
- ಉದ್ಯೋಗ ವಿನಿಮಯ ಕೇಂದ್ರದ ನೋಂದಣಿ ಪ್ರಮಾಣಪತ್ರ
- 2 ಪಾಸ್ಪೋರ್ಟ್ ಅಳತೆಯ ಫೋಟೋ
- ಜಾತಿ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳೆಗೆ ನೀಡಿರುವಂತೆ ಅರ್ಜಿ ಸಲ್ಲಿಸಿ.
- ಮೊದಲು ಅಭ್ಯರ್ಥಿಗಳು ರೈಲ್ವೆ ವೀಲ್ ಫ್ಯಾಕ್ಟರಿ (RWF) ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
- ನಂತರ ಅರ್ಜಿಯಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಹಾಗೂ ಇನ್ನಿತರ ಅಗತ್ಯವಿವರಗಳನ್ನು ಭರ್ತಿ ಮಾಡಿ.
- ನಂತರ ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಒಂದು ಲೋಕೋಟೆಗೆ ಹಾಕಿ.
- “ಹಿರಿಯ ಸಿಬ್ಬಂದಿ ಅಧಿಕಾರಿ -II, ಸಿಬ್ಬಂದಿ ಇಲಾಖೆ, ರೈಲ್ವೆ ವೀಲ್ ಫ್ಯಾಕ್ಟರಿ, ಯಲಹಂಕ, ಬೆಂಗಳೂರು – 560 064” ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳುಹಿಸಿ.
ಆಯ್ಕೆ ಪ್ರಕ್ರಿಯೆ:
1. ಮೆರಿಟ್ ಆಯ್ಕೆ:
ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.
SSLC ಅಲ್ಲಿ ಇಬ್ಬರು ಅಭ್ಯರ್ಥಿಗಳು ಒಂದೇ ರೀತಿಯ ಅಂಕವನ್ನು ಗಳಿಸಿದ್ದರೆ, ಹೆಚ್ಚಿನ ವಯೋಮಿತಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
2. ದಾಖಲಾತಿ ಪರಿಶೀಲನೆ:
ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ.
3. ವೈದ್ಯಕೀಯ ತಪಾಸಣೆ:
ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದ ನಂತರ ರೈಲ್ವೆ ವೈದ್ಯಾಧಿಕಾರಿಗಳಿಂದ ದೈಹಿಕ ತಪಾಸಣೆ ಮಾಡಿಸಿಕೊಂಡು ದೈಹಿಕ ಪ್ರಮಾಣಪತ್ರವನ್ನು ಸಲ್ಲಿಸಬೇಕು.
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
| ವಿವರಗಳು | ಪ್ರಮುಖ ದಿನಾಂಕಗಳು |
| ಅಧಿಸೂಚನೆ ಹೊರಡಿಸಿದ ದಿನಾಂಕ | 28-02-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 208-02-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 01-04-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:
| ವಿವರಗಳು | ಪ್ರಮುಖ ಲಿಂಕುಗಳು |
| ಅಧಿಕೃತ ಅಧಿಸೂಚನೆಯ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ರೈಲ್ವೆ ವೀಲ್ ಫ್ಯಾಕ್ಟರಿ (RWF) ಒಟ್ಟು 192 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಇದು ಶಾಶ್ವತ ಉದ್ಯೋಗವಲ್ಲ ಬದಲಿಗೆ ಒಂದು ವರ್ಷದ ವೃತ್ತಿಪರ ತರಬೇತಿಯಾಗಿದೆ ಜೊತೆಗೆ ಅಭ್ಯರ್ಥಿಗಳಿಗೆ ತರಬೇತಿ ಸಮಯದಲ್ಲಿ ಅತ್ಯಾಕರ್ಷಕ ಸ್ಟೈಫನ್ಡ್ ನೀಡಲಾಗುತ್ತದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದರೆ ಇಂದೇ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಆಕ್ಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಒಟ್ಟು 192 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದೆ.
ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-04-2026.
ಇತರೆ ಪ್ರಮುಖ ಲಿಂಕುಗಳು:
- Gruha Arogya Scheme: 30 ವರ್ಷ ಮೇಲ್ಪಟ್ಟವರಿಗೆ ಸರ್ಕಾರದ ಉಚಿತ ಹೊಸ ಆರೋಗ್ಯ ಸೌಲಭ್ಯ!
- Aasare Scheme: ಒಂಟಿಯಾಗಿ ಬದುಕುತ್ತಿದ್ದೀರಾ? ಭಯ ಬೇಡ! ಬಂದಿದೆ ಆಸರೆ ಯೋಜನೆ
- Ganga Kalyana Scheme: ಮನೆಯಲ್ಲೇ ಕುಳಿತು ಅರ್ಜಿ ಸ್ಥಿತಿ ತಿಳಿಯಿರಿ ₹4.75 ಲಕ್ಷ ಸಹಾಯಧನವನ್ನು ತಮ್ಮದಾಗಿಸಿಕೊಳ್ಳಿ!
- Vivo KanyaGyaan Scholarship 2026 : ₹60,000 ವರೆಗೆ ಆರ್ಥಿಕ ಸಹಾಯ : ಬಂದೇ ಬಿಡ್ತು ನೋಡಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ!




