ನಮಸ್ಕಾರ ರೈತಭಾಂದವರೇ, ನಿಮ್ಮ ಮಕ್ಕಳು ನಿಮ್ಮಂತೆ ಕೂಲಿ-ನಾಲಿ ಮಾಡಿ ಜೀವನ ನಡೆಸುವ ಬದಲು ಒಳ್ಳೆಯ ಗವರ್ನಮೆಂಟ್ ಉದ್ಯೋಗವನ್ನು ಪಡೆದುಕೊಂಡು ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕೆಂಬ ಆಸೆ ಕನಸ್ಸನ್ನು ಹೊತ್ತಿದ್ದೀರಾ? ನಿಮ್ಮ ಈ ಆಸೆ-ಕನಸಿಗೆ ಹಣಕಾಸಿನ ಸಮಸ್ಯೆ ಅಡ್ಡಿಯಾಗುತ್ತಿದೀಯಾ? ಹಣಕಾಸಿನ ಸಮಸ್ಯೆಯಿಂದ ಗೋವರ್ನಮೆಂಟ್ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಉನ್ನತ ಶಿಕ್ಷಣವನ್ನು ನಿಮ್ಮ ಮಕ್ಕಳಿಗೆ ಕೊಡಿಸಲು ಸಾಧ್ಯವಾಗುತ್ತಿಲ್ಲವೇ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ!
Raitha Vidyanidhi Yojane in Kannada
ಕರ್ನಾಟಕ ಸರ್ಕಾರವು ರೈತರ ಮಕ್ಕಳು ಉನ್ನತ ಶಿಕ್ಷಣವನ್ನು ಮುಂದುವರೆಸಲು ಉತ್ತೇಜನ ನೀಡುವ ಉದ್ದೇಶದಿಂದ ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿ ಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ರೈತರ ಮಕ್ಕಳಿಗೆ ಅವರು ವ್ಯಾಸಂಗ ಮಾಡುತ್ತಿರುವ ವಿಷಯಕ್ಕೆ ಅನುಗುಣವಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಜೊತೆಗೆ ಲಿಂಗಗಳ ಆಧಾರದಲ್ಲಿ ವಿದ್ಯಾರ್ಥಿವೇತನದಡಿಯಲ್ಲಿ ಸಿಗುವ ಸಹಾಯಧನದಲ್ಲಿ ವ್ಯತ್ಯಾಸ ಇರಲಿದೆ.
ಈ ಯೋಜನೆಯಡಿಯಲ್ಲಿ ಯಾವುದೇ ವರ್ಗಗಳ ಭೇದ ಭಾವವಿಲ್ಲದೆ ಎಲ್ಲಾ ವರ್ಗದ ರೈತರ ಮಕ್ಕಳು ಕೂಡ ವಿದ್ಯಾರ್ಥಿವೇತನವನ್ನು ನೀಡಲಾಗಿತ್ತದೆ. ಹಾಗಿದ್ದರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು? ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಯಾವೆಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿರಬೇಕು? ಹಾಗೂ ಇನ್ನಿತರ ಮಾಹಿತಿಯನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೊಣ.

ಇದೇ ರೀತಿ ವಿದ್ಯಾರ್ಥಿಗಳ ನೆರವಿಗಿರುವ ಸಾಕಷ್ಟು ವಿದ್ಯಾರ್ಥಿವೇತನದ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಮಲ್ನಾಡ್ ನ್ಯೂಸ್.ಇನ್ ಗೆ ಭೇಟಿ ನೀಡಿ.
ಯೋಜನೆಯ ಅವಲೋಕನ:
| ಯೋಜನೆಯನ್ನು ಜಾರಿಗೊಳಿಸಿದ ಸರ್ಕಾರ | ಕರ್ನಾಟಕ ಸರ್ಕಾರ |
| ಯೋಜನೆಯ ಹೆಸರು | ರೈತ ವಿದ್ಯಾನಿಧಿ ಯೋಜನೆ (Raitha Vidyanidhi Yojane) |
| ಅರ್ಹ ಫಲಾನುಭವಿಗಳು | ರೈತರ ಮಕ್ಕಳು |
| ಯೋಜನೆಯ ಉದ್ದೇಶ | ರೈತರ ಮಕ್ಕಳು ವಿದ್ಯಾರ್ಥಿವೇತನ ನೀಡುವ ಮೂಲಕ ಉನ್ನತ ಶಿಕ್ಷಣಕ್ಕೆ ಅಗತ್ಯವಾದ ಆರ್ಥಿಕ ನೆರವನ್ನು ಒದಗಿಸುವುದು |
| ವಿದ್ಯಾರ್ಥಿವೇತನದಲ್ಲಿ ಸಿಗುವ ಒಟ್ಟು ಸಹಾಯಧನ | ₹11,000 ದ ವರೆಗೆ |
| ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಯೋಜನೆಯ ಕುರಿ ಪರಿಚಯ:
ರೈತ ವಿದ್ಯಾನಿಧಿ ಯೋಜನೆ (Raitha Vidyanidhi Yojane) ಯು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಈ ಯೋಜನೆಯನ್ನು ಕರ್ನಾಟಕ ಸರ್ಕಾರವು ಆಗಸ್ಟ್ 2021 ರಂದು ಜಾರಿಗಳಿಸಿತು. ಈ ಯೋಜನೆಯ ಮುಖ್ಯ ಉದ್ದೇಶ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಅಗತ್ಯವಾದ ಆರ್ಥಿಕ ನೆರವನ್ನು ಒದಗಿಸಿ, ಗವರ್ನಮೆಂಟ್ ಉದ್ಯೋಗವನ್ನು ಪಡೆಯಲು ಪ್ರೇರೇಪಿಸುವುದಾಗಿದೆ.
ವಿದ್ಯಾನಿಧಿ ಯೋಜನೆಯಡಿಯಲ್ಲಿ ರೈತರ ಮಕ್ಕಳು 8 ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಪದವಿ ಪಡೆಯುವ ವರೆಗೂ ಕೂಡ ವಿದ್ಯಾರ್ಥಿವೇತನವನ್ನು ಪಡೆಯಬಹುದಾಗಿದೆ. ಈ ಯೋಜನೆಯಡಿಯಲ್ಲಿ ಎಷ್ಟೆಷ್ಟು ವಿದ್ಯಾರ್ಥಿವೇತನದ ಸಿಗಲಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
ಯೋಜನೆಯನ್ನು ಜಾರಿಗೊಳಿಸಿರುವುದರ ಉದ್ದೇಶ:
1. ಬೇರೆ ಕ್ಷೇತ್ರದಲ್ಲಿ ಉದ್ಯೋಗ ಪಡೆಯುವಂತೆ ಉತ್ತೇಜನ:
ಕೃಷಿಯನ್ನೇ ತಮ್ಮ ಜೀವನಾಡಿಯಾಗಿಸಿಕೊಂಡು ಬದುಕುತ್ತಿರುವ ಸಾಕಷ್ಟು ರೈತಾಪಿ ಕುಟುಂಬಗಳ ಮುಂದಿನ ಪೀಳಿಗೆಯೂ ವೃತ್ತಿಪರ ಶಿಕ್ಷಣವನ್ನು ಪಡೆದುಕೊಂಡು ಶಾಶ್ವತ ಉದ್ಯೋಗವಾಗಿರುವ ಸರ್ಕಾರಿ ಉದ್ಯೋಗಗಳಲ್ಲಿ ತಮ್ಮ ವೃತ್ತಿ ಜೀವನವನ್ನು ಮುಂದುವರೆಸುವಂತೆ ಪ್ರೇರೇಪಣೆ ನೀಡುವುದು.
2. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು:
ರೈತರ ಕುಟುಂಬದಲ್ಲಿ ಹೆಣ್ಣು ಮಕ್ಕಳು ಕೂಡ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಅವರು ಕೂಡ ಗಂಡು ಮಕ್ಕಳಂತೆ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ರೈತರ ಹೆಣ್ಣು ಮಕ್ಕಳಿಗೆ 8 ತರಗತಿ ಯಿಂದಲೇ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.
3. ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ:
ರೈತರ ಮಕ್ಕಳು ತಮ್ಮ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸದೆ ತನ್ನ ಪೋಷಕರೊಂದಿಗೆ ಕೃಷಿ ಕೆಲಸಕ್ಕೆ ಹೋಗುವ ಬದಲು, ಎಲ್ಲರಂತೆ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣವನ್ನು ಪಡೆದು ಒಳ್ಳೆಯ ಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು.
4. ಕುಟುಂಬದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು:
ಕೃಷಿ ಚಟುವಟಿಕೆಯನ್ನು ಮುಂದುವರೆಸಲು ಅಗತ್ಯವಾದ ಬಿತ್ತನೆ ಬೀಜ, ಗೊಬ್ಬರಗಳು ಹಾಗೂ ಇನ್ನಿತರ ಕೃಷಿ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಸಾಲ-ಸೋಲ ಮಾಡುವ ರೈತರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸಬೇಕಾದರೆ ಅವರ ಮೇಲಿನ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚುತ್ತದೆ. ಅಂತಹ ರೈತರ ಮಕ್ಕಳ ಶಿಕ್ಷಣಕ್ಕೆ ಈ ಯೋಜನೆಯಡಿಯಲ್ಲಿ ಸರ್ಕಾರವೇ ಹಣ ಒದಗಿಸುವ ಮೂಲಕ ರೈತರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು.
ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗಾಗುವ ಪ್ರಯೋಜನಗಳು:
1. ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ರೈತರ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಸರ್ಕಾರದಿಂದ ಭಾರೀ ಮೊತ್ತದ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದು. ಇದರಿಂದ ತಮ್ಮ ಕೋರ್ಸ್ ಗೆ ಸಂಬಂಧಿಸಿದ ಪ್ರವೇಶ ಶುಲ್ಕವನ್ನು, ಪರೀಕ್ಷಾ ಶುಲ್ಕವನ್ನು ಹಾಗೂ ಇನ್ನಿತರ ಶೈಕ್ಷಣಿಕ ವೆಚ್ಚವನ್ನು ಪಾವತಿ ಮಾಡಲು ಸಾಧ್ಯವಾಗುತ್ತದೆ. ಇದಕ್ಕಾಗಿ ಪೋಷಕರಿಂದ ಹಣ ಕೇಳುವ ಅಗತ್ಯ ಇರುವುದಿಲ್ಲ.
2. ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ರೈತರ ಮಕ್ಕಳಿಗೆ ಸಿಗುವ ವಿದ್ಯಾರ್ಥಿವೇತನವು ಮಕ್ಕಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಇದರಿಂದಾಗಿ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ.
3. ರೈತರ ಮಕ್ಕಳಿಗೆ ಸರ್ಕಾರದಿಂದ ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ಸಹಾಯಧನ ಸಿಗುವುದರಿಂದ ರೈತರ ಮಕ್ಕಳು ಹಣಕಾಸಿನ ಸಮಸ್ಯೆಯ ಕುರಿತು ಯಾವುದೇ ಚಿಂತೆ ಮಾಡದೇ ತಮ್ಮ ಪೂರ್ಣ ಗಮನವನ್ನು ಓದಿನ ಕಡೆ ಕೇಂದ್ರೀಕರಿಸುವ ಮೂಲಕ ಉನ್ನತ ಶಿಕ್ಷಣವನ್ನು ಹೆಚ್ಚಿನ ಅಂಕಗಳೊಂದಿಗೆ ಯಶಸ್ವಿಯಾಗಿ ಪೂರ್ಣಗೊಳಿಸಿ ಒಳ್ಳೆಯ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನದ ಮೊತ್ತ:
ಈ ಯೋಜನೆಯಡಿಯಲ್ಲಿ ಎಲ್ಲಾ ವರ್ಗದ ರೈತರ ಮಕ್ಕಳಿಗೂ ಈ ವಿದ್ಯಾರ್ಥಿವೇತನ ಲಭ್ಯವಾಗುತ್ತದೆ. ಆದರೆ ಈ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳು ಆಯ್ಕೆ ಮಾಡಿರುವ ಕೌರ್ಸ್ ಹಾಗೂ ಲಿಂಗಗಳ ಮೇಲೆ ನಿರ್ಧಾರವಾಗಿರುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
| ಕೋರ್ಸ್ ಹೆಸರು | ಗಂಡು ಮಕ್ಕಳಿಗೆ ಸಿಗುವ ಸಹಾಯಧನ | ಹೆಣ್ಣು ಮಕ್ಕಳಿಗೆ ಸಿಗುವ ಸಹಾಯಧನ |
| 8 ನೇ ತರಗತಿ, 9 ನೇ ತರಗತಿ ಹಾಗೂ 10 ನೇ ತರಗತಿ | ಗಂಡು ಮಕ್ಕಳಿಗೆ ಯಾವುದೇ ಸಹಾಯಧನ ಸಿಗುವುದಿಲ್ಲ | ₹2,000 |
| PUC / ITI ಹಾಗೂ ಡಿಪ್ಲೊಮಾ ಕೋರ್ಸ್ ಗಳಿಗೆ | ₹2,500 | ₹3,000 |
| ಸಾಮಾನ್ಯ ಪದವಿಗಳಾದ BA, BSc, ಬಿಕಾಂ ಕೋರ್ಸ್ ಗಳು | ₹5,000 | ₹5,500 |
| LLB, ಪ್ಯಾರಾ ಮೆಡಿಕಲ್, ನರ್ಸಿಂಗ್, ಬಿ.ಫಾರ್ಮ್ ಗಳಂತಹ ವೃತ್ತಿಪರ ಕೋರ್ಸ್ ಗಳು | ₹7,500 | ₹8,000 |
| MBBS, BE, B.Tech ಹಾಗೂ ಎಲ್ಲಾ ಪಿಜಿ ಕೋರ್ಸ್ ಗಳು | ₹10,000 | ₹11,000 |
ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ಅರ್ಹತಾ ಮಾನದಂಡಗಳು:
- ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಗಳ ಪೋಷಕರು ರೈತರಾಗಿರಬೇಕು.
- ವಿದ್ಯಾರ್ಥಿಗಳ ಪೋಷಕರು ತಮ್ಮ ಹೆಸರಿನಲ್ಲಿ ಕೃಷಿ ಭೂಮಿಯನ್ನು ಹೊಂದಿರಬೇಕು.
- ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಅಥವಾ ಅನುದಾನಿತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ವಿದ್ಯಾರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಲ್ಲಿ ಪಿಯೂಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ FRUITS ಪೋರ್ಟಲ್ ನಲ್ಲಿ ನೋಂದಣಿ ಆಗಿರಬೇಕು.
ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಪೋಷಕರ FRUITS ಐಡಿ
- ಶಾಲಾ ಮತ್ತು ಕಾಲೇಜು ಪ್ರಮಾಣಪತ್ರ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಪೋಷಕರ ಜಮೀನಿನ ದಾಖಲೆಗಳು
- ವಿದ್ಯಾರ್ಥಿಗಳ ಅಥವಾ ಪೋಷಕರ ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಗಳ ಬ್ಯಾಂಕ್ ಪಾಸ್ ಬುಕ್ ವಿವರ
- ವಿದ್ಯಾರ್ಥಿಗಳ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
- ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
- ಶೈಕ್ಷಣಿಕ ಪ್ರಮಾಣಪತ್ರ
ಹಾಗೂ ಇತರೆ ದಾಖಲೆಗಳು
ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಯೋಜನೆ (Raitha Vidyanidhi Yojane) ಯಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬೇಕಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
- ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು SSP ಅಧಿಕೃತ ಪೋರ್ಟಲ್ https://ssp.postmatric.karnataka.gov.in/ ಗೆ ಭೇಟಿ ನೀಡಿ
- ಹೊಸ ಬಳಕೆದಾರರಾಗಿದ್ದರೆ, ಕ್ರೀಟ್ ಅಕೌಂಟ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆ ಹಾಗೂ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ನೊಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ, ನಿಮ್ಮ ವೈಯಕ್ತಿಕ ವಿವರವನ್ನು ಭರ್ತಿಮಾಡಿ. ನೀವು ಓದುತ್ತಿರುವ ಶಾಲೆ ಅಥವಾ ಕಾಲೇಜನ್ನು ಆಯ್ಕೆಮಾಡಿ. ನಂತರ ನೀವು ವ್ಯಾಸಂಗ ಮಾಡುತ್ತಿರುವ ಕೋರ್ಸ್ ಗಳನ್ನೂ ಆಯ್ಕೆ ಮಾಡಿಕೊಳ್ಳಿ.
- ನಂತರ ನಿಮ್ಮ ಪೋಷಕರ FRUITS ಐಡಿ ಅನ್ನು ನಮೂದಿಸಿ ಹಾಗೂ ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅಪ್ಲೋಡ್ ಮಾಡಿರುವ ಹಾಗೂ ಭರ್ತಿ ಮಾಡಿರುವ ಎಲ್ಲಾ ದಾಖಲೆಗಳು ಸರಿ ಇದೆಯೇ ಎಂದು ಪರಿಶೀಲಿಸಿ ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಅಂತಿಮ ತೀರ್ಮಾನ:
ಕರ್ನಾಟಕ ಸರ್ಕಾರವು ರೈತರ ಮಕ್ಕಳ ಶೈಕ್ಷಣಿಕ ನೆರವಿಗಾಗಿ ರೈತ ವಿದ್ಯಾನಿಧಿ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ರೈತರ ಮಕ್ಕಳಿಗೆ ಭಾರೀ ಮೊತ್ತದ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಲಾಭವನ್ನು ಪಡೆದುಕೊಂಡಿದ್ದಾರೆ. ನೀವು ರೈತರ ಮಕ್ಕಳಾಗಿದ್ದು, ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಬಯಸಿದರೆ ಇಂದೇ SSP ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ರೈತ ವಿದ್ಯಾನಿಧಿ ಯೋಜನೆ (Raitha Vidyanidhi Yojane) ಗೆ ಅರ್ಜಿ ಸಲ್ಲಿಸಲು ಕರ್ನಾಟಕದ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
ರೈತ ವಿದ್ಯಾನಿಧಿ ಯೋಜನೆ (Raitha Vidyanidhi Yojane) ಗೆ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರೈತರ ಗಂಡು ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ. ಆದರೆ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೌದು, ರೈತರು FRUITS ಐಡಿ ಹೊಂದಿರುವುದು ಕಡ್ಡಾಯ.
ರೈತ ವಿದ್ಯಾನಿಧಿ ಯೋಜನೆ (Raitha Vidyanidhi Yojane) ಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ.







